ಕಾರವಾರ : ಕಾಂಗ್ರೆಸ್ ಸರ್ಕಾರ ಇದ್ದಾಗ 23 ಕಾರ್ಯಕರ್ತರ ಹತ್ಯೆಯಾಗಿತ್ತು. ಆದರೆ ಆ ಸಂದರ್ಭದಲ್ಲಿ ಕೆಲ ಕ್ರೂರ ಆರೋಪಿಗಳನ್ನು ಬಂಧಿಸದೇ ಬಿಟ್ಟಿರುವುದರಿಂದಲೇ ಇಂತಹ ಅನಾಹುತಗಳು ಮುಂದುವರೆಯುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗ 23 ಕಾರ್ಯಕರ್ತರ ಹತ್ಯೆಯಾಗಿತ್ತು. ಆ ಸಂದರ್ಭದಲ್ಲಿ ಕೆಲ ಕ್ರೂರ ಆರೋಪಿಗಳನ್ನು ಬಂಧಿಸದೇ ಬಿಟ್ಟಿದ್ದರಿಂದಲೇ ಇಂತಹ ಅನಾಹುತಗಳು ಮುಂದುವರೆಯುತ್ತಿವೆ. ಸಿಬಿಐಗೆ ಕೊಟ್ಟಿರುವ ಪ್ರಕರಣಗಳು ವಿಳಂಭವಾಗಿದೆ. ಇದನ್ನು ಹೊರತುಪಡಿಸಿದರೆ ಹತ್ಯೆ ಮಾಡಿದ ಎಲ್ಲ ಆರೋಪಿಗಳನ್ನು ನಮ್ಮ ಸರ್ಕಾರ ಬಂಧನ ಮಾಡಿ ಜೈಲಿಗಟ್ಟಿದೆ ಎಂದರು.
ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಬಗ್ಗೆ ಪ್ರಾಥಮಿಕ ಸುಳಿವು ಇದೆ. ನಮ್ಮ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪ್ರಕರಣದ ತನಿಖೆ ದಿಕ್ಕು ತಪ್ಪಿಲ್ಲ. ಸರಿಯಾದ ದಿಕ್ಕಿನಲ್ಲೇ ಸಾಗುತ್ತಿದೆ. ಶೀಘ್ರದಲ್ಲಿಯೇ ಬಂಧನ ಮಾಡಲಿದ್ದಾರೆ ಎಂದು ತಿಳಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ