ರಾಜ್ಯದ ಮೇಲೆ ಮೇಲ್ಮೈ ಸುಳಿಗಾಳಿ ಇರುವುದರಿಂದ ಮತ್ತೆ ಮಳೆಯ ಆರ್ಭಟ ಮುಂದುವರೆಯಲಿದ್ದು, ರಾಜ್ಯದ ವಿವಿಧ ಭಾಗದಲ್ಲಿ ಇಂದಿನಿಂದ ಆಗಸ್ಟ್ 6 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ ಪ್ರದೇಶ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಆಗಸ್ಟ್ 6ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಎಲ್ಲಾ ಪ್ರದೇಶಗಳಿಗೂ ಈಗಾಗಲೇ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಗೆ ಆಗಸ್ಟ್ 6ವರೆಗೆ ರೆಡ್ ಅಲರ್ಟ್ ಇರಲಿದ್ದು, ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ಆಗಸ್ಟ್ 5 ವರೆಗೆ ರೆಡ್ ಅಲರ್ಟ್ ಇರಲಿದೆ ಎಂದು ಸೂಚಿಸಿದೆ.
ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಜಾರಿ ಮಾಡಲಾಗಿದ್ದು, ಧಾರವಾಡ, ಗದಗ, ಬಳ್ಳಾರಿ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮೈಸೂರು, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಆಗಸ್ಟ್ 4 ರವರೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ