ಕಾಲು ಸಂಕ ದಾಟುವಾಗ ಎರಡನೇ ತರಗತಿಯ ವಿದ್ಯಾರ್ಥಿನಿ ಕಾಲು ಜಾರಿ ನೀರಿಗೆ ಬಿದ್ದಿದ್ದು, ನೀರಿನಲ್ಲಿ ಕೊಚ್ಚಿ ಹೋಗಿದ್ಧಾಳೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ಘಟನೆ ನಡೆದಿದೆ. ಬೊಳಂಬಳ್ಳಿ ಗ್ರಾಮದ ಮಕ್ಕಿಮನೆ ಪ್ರದೀಪ್ ಪೂಜಾರಿ, ಸುಮಿತ್ರಾ ದಂಪತಿ ಪುತ್ರಿ 7 ವರ್ಷದ ಸನ್ನಿಧಿ ಚಪ್ಪರಿಕೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು ಸನ್ನಿಧಿ ಶಾಲೆ ಮುಗಿಸಿ ಮನೆಗೆ ಬರುವಾಗ ಕಾಲು ಸಂಕದ ಮೇಲಿಂದ ಕಾಲು ಜಾರಿ ಬಿದ್ದಿದ್ದಾಳೆ.ಬಾಲಕಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಘಟನಾ ಸ್ಥಳಕ್ಕೆ ಬೈಂದೂರು ತಹಶೀಲ್ದಾರ್ ಕಿರಣ್ ಗೋರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿಯ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ