ನೋಯ್ಡಾ ಹೌಸಿಂಗ್ ಸೊಸೈಟಿಯಲ್ಲಿ ಬಿಜೆಪಿ ಮುಖಂಡನ ಮನೆಯ ಮೇಲೆ ಬುಲ್ಡೋಜರ್ ದಾಳಿ ನಡೆಸಿದೆ. ಬಿಜೆಪಿ ಕಿಸಾನ್ ಮೋರ್ಚಾದ ಮುಖಂಡ ಶ್ರೀಕಾಂತ್ ತ್ಯಾಗಿ ಮಹಿಳೆಯೊಂದಿಗೆ ಗಲಾಟೆ ಮಾಡಿದ್ದಲ್ಲದೆ ಕೀಳುಮಟ್ಟದಲ್ಲಿ ವರ್ತಿಸಿದ್ದಾರೆ. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಯೋಗಿ ಸರ್ಕಾರದ ಬುಲ್ಡೋಜರ್ ಕಾರ್ಯರೂಪಕ್ಕಿಳಿದಿದೆ. ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ಸೆಕ್ಟರ್-93B ತಲುಪಿದ ಪೋಲೀಸರು ಹಾಗೂ ಅಧಿಕಾರಿಗಳು ಶ್ರೀಕಾಂತ್ ತ್ಯಾಗಿ ಅವರಿಗೆ ಸೇರಿದ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಯಿತು. ತ್ಯಾಗಿ ಬೆಂಬಲಿಗರನ್ನು ಪೊಲೀಸರು ಚದುರಿಸಿದ್ದಲ್ಲದೆ, ತ್ಯಾಗಿ ವಿರುದ್ಧ ಗ್ಯಾಂಗ್‌ಸ್ಟರ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕೆಲವು ದಿನಗಳ ಹಿಂದೆ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆ ಮತ್ತು ತ್ಯಾಗಿ ನಡುವೆ ಜಗಳವಾಗಿತ್ತು. ತ್ಯಾಗಿ ಸಸಿಗಳನ್ನು ನೆಡುವ ಸಂದರ್ಭದಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಮಹಿಳೆ ಪ್ರತಿಭಟಿಸಿದರು. ಈ ವೇಳೆ ತನಗೆ ಏನು ಬೇಕಾದರೂ ಮಾಡುವ ಹಕ್ಕಿದೆ ಎಂದು ವಾದ ಮಾಡುತ್ತಾ ಮಹಿಳೆಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿತ್ತು.
ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯ ಎಂದು ಹೇಳಿಕೊಂಡರೂ ಪಕ್ಷ ಹಿಂದೆ ಸರಿಯದೆ ಆತನ ವಿರುದ್ಧ ಕ್ರಮ ಕೈಗೊಂಡಿದೆ.ಅಧಿಕಾರ ದುರುಪಯೋಗ ಪಡಿಸಿಕೊಂಡ ಶ್ರೀಕಾಂತ್ ತ್ಯಾಗಿ ವಿರುದ್ಧ ಕೈಗೊಂಡ ಕ್ರಮಗಳಿಗಾಗಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ, ಬಿಜೆಪಿಯ ದೆಹಲಿ ವಕ್ತಾರ ಖೇಮಚಂದ್ ಶರ್ಮಾ ಧನ್ಯವಾದ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ