ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕೋವಿಡ್ ಸಮಯದಲ್ಲಿದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವರು, ಗಣೇಶೋತ್ಸವ ಆಚರಣೆಗೆ ಯಾವುದೇ ಇತಿ ಮಿತಿಯಾಗಲೀ, ನಿರ್ಬಂಧವಾಗಲೀ ಇರುವುದಿಲ್ಲ. ಬೆಂಗಳೂರು ನಗರದಲ್ಲಿ ವಾರ್ಡ್‌ಗೆ ಒಂದು ಗಣೇಶ ಕೂರಿಸಬೇಕು ಎಂಬ ಮಹಾನಗರ ಪಾಲಿಕೆ ನಿಯಮಗಳ ಬಗ್ಗೆ ಸ್ಪಷ್ಟನೆ ನೀಡಿ, ಈ ಹಿಂದೆ ಕೋವಿಡ್ ಇದ್ದ ಕಾರಣ ಗಣೇಶೋತ್ಸವ ಆಚರಣೆಗೆ ಮಿತಿ ಹೇರಲಾಗಿತ್ತು. ಈಗ ಆ ರೀತಿಯ ಯಾವುದೇ ನಿಯಮಗಳು ಇಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದರು.
ಈ ಬಾರಿ ಸಾರ್ವಜನಿಕ ಗಣೇಶೋತ್ಸವವನ್ನು ಕೋವಿಡ್ ಪೂರ್ವದಲ್ಲಿ ಯಾವ ರೀತಿ ಬೀದಿಗಳಲ್ಲಿ ಆಚರಿಸುತ್ತಿದ್ದರೋ ಆ ರೀತಿ ಆಚರಿಸಬಹುದು. ರಸ್ತೆಗೊಂದು, ವಾರ್ಡ್‌ಗೊಂದು, ಬೀದಿಗೊಂದು ಎಂಬ ನಿಯಮಗಳು ಇರುವುದಿಲ್ಲ ಎಂದರು.
ಗಣೇಶೋತ್ಸವ ಸಂದರ್ಭದಲ್ಲಿ ಪ್ಲಾಸ್ಟಿಕ್ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶಮೂರ್ತಿ ಕೂರಿಸಲು ಆವಕಾಶವಿಲ್ಲ. ಪರಿಸರ ಪ್ರೇಮಿ ಮಣ್ಣಿನ ಗಣೇಶ ಮೂರ್ತಿಗಳನ್ನು ಕೂರಿಸುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ