Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಸ್ಥಬ್ದಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ ಪರೇಡ್ ಸಮಿತಿ: ಗಣರಾಜ್ಯೋತ್ಸವದಲ್ಲಿ ನಾರಿಶಕ್ತಿಯ ಪ್ರದರ್ಶನಕ್ಕೆ ಅಸ್ತು

Udupifirst-udupinews-


ಬೆಂಗಳೂರು : ಕರ್ನಾಟಕದ ನಾರಿಶಕ್ತಿ ಸ್ತಬ್ಧಚಿತ್ರಕ್ಕೆ ಗಣರಾಜ್ಯೋತ್ಸವ ಪರೇಡ್ ಸಮಿತಿ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ಈ ಮೂಲಕ ಕೊನೆ ಕ್ಷಣದಲ್ಲಿ ಕರ್ನಾಟಕ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ಗೆ ಸೇರ್ಪಡೆಯಾಗಿದೆ.

14ನೇ ಬಾರಿ ಕರ್ನಾಟಕದ ಟ್ಯಾಬ್ಲೋ ಕರ್ತವ್ಯ ಪಥದಲ್ಲಿ ಸಾಗಲಿದೆ. ರಾಜಧಾನಿ ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆಕರ್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಕರ್ನಾಟಕದ ನಾರಿಶಕ್ತಿ ಸ್ತಬ್ದ ಚಿತ್ರಕ್ಕೆ ಅವಕಾಶ ನೀಡಲಾಗಿದೆ.

ಈ ಹಿಂದೆ ಕೇಂದ್ರವು ಬೇರೆ ರಾಜ್ಯಗಳಿಗೂ ಅವಕಾಶ ಕೊಡುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಅವಕಾಶಕ್ಕೆ ತಿರಸ್ಕರಿಸಿತ್ತು. ಇದರಿಂದ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. 2023ರ ಗಣರಾಜ್ಯೋತ್ಸವದಂದು ಕರ್ನಾಟಕವು ರಾಗಿ ವೈವಿಧ್ಯತೆಯ ಕುರಿತು ಪ್ರದರ್ಶನ ನೀಡುವುದಾಗಿ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರವು ತಿರಸ್ಕರಿಸಿತ್ತು.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo