Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಜಿಲ್ಲಾ ಅತ್ಯುತ್ತಮ ಯುವ ಮಂಡಳ ಪ್ರಶಸ್ತಿ ಪ್ರಕಟ

Udupifirst-udupinews-


ಉಡುಪಿ:- ಕೇಂದ್ರ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಸಂಘಟನೆ, ಉಡುಪಿ ಜಿಲ್ಲೆ ಇವರ ವತಿಯಿಂದ ನೀಡಲಾಗುವ ಜಿಲ್ಲಾ ಅತ್ಯುತ್ತಮ ಯುವ ಮಂಡಳ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಕಾರ್ಕಳ ತಾಲೂಕು ನಂದಳಿಕೆ ಅಬ್ಬನಡ್ಕದ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲವು (ರಿ) ಆಯ್ಕೆಯಾಗಿರುತ್ತದೆ.


 ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಅಂತಿಮ ಸುತ್ತಿನಲ್ಲಿ ಮೇಲ್ಕಂಡ ಯುವಕ ಮಂಡಲವು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಪ್ರಶಸ್ತಿಯು 25,000 ರೂ. ನಗದು ಹಾಗೂ ಪ್ರಶಂಸ ಪತ್ರವನ್ನು ಒಳಗೊಂಡಿದ್ದು, ಜನವರಿ ತಿಂಗಳಲ್ಲಿ ನಡೆಯುವ ಜಿಲ್ಲಾ ನಾಯಕತ್ವ ಹಾಗೂ ಸಮುದಾಯ ಬೆಳವಣಿಗೆ ಶಿಬಿರ/ ಯುವ ಸಮಾವೇಶದಲ್ಲಿ ಪ್ರಶಸ್ತಿಯನ್ನು ವಿತರಿಸಲಾಗುವುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ವಿಲ್ಫೆçಡ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo