Slider

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ; ಆರೋಪಿ ಸಂತೋಷ್ ರಾವ್ ನಿರ್ದೋಷಿ , ಸಿಬಿಐ ಕೋರ್ಟ್ ತೀರ್ಪು

Udupi

 


ಬೆಂಗಳೂರು: 2012ರಲ್ಲಿ ನಡೆದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ (17 ವರ್ಷ) ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್‌ ರಾವ್‌ನನ್ನು ಕೋರ್ಟ್‌ ದೋಷಮುಕ್ತಗೊಳಿಸಿದೆ.

ಬೆಂಗಳೂರಿನ ಸಿಬಿಐ ಕೋರ್ಟ್‌ 11 ವರ್ಷಗಳ ಬಳಿಕ ತೀರ್ಪು ನೀಡಿದೆ. ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್.ಸಿ.ಬಿ. ಇಂದು ತೀರ್ಪು ಪ್ರಕಟಿಸಿ, ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿಯನ್ನು ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ. ಆರೋಪಿ ಪರ ವಕೀಲ ಮೋಹಿತ್ ಕುಮಾರ್ ವಾದ ಮಂಡಿಸಿದ್ದರು. ಅತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ರೇಪ್ ಮಾಡಿರುವ ಬಗ್ಗೆ ವೈದ್ಯಕೀಯ ವರದಿ ಇರಲಿಲ್ಲ. ಎರಡು ದಿನ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು.

ಸೌಜನ್ಯ ಮೃತಪಟ್ಟ ದಿನ ಭಾರೀ ಮಳೆ ಇತ್ತು. ಅಂದು 500 ಜನ ಹುಡುಕಾಟ ನಡೆಸಿದ್ದರು. ಆದರೆ ಅಂದು ಶವ ಪತ್ತೆಯಾಗಿರಲಿಲ್ಲ. ನದಿ ದಾಟಿ ಹೋಗಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ ಪೊಲೀಸರು ಎರಡು ದಿನದ ಬಳಿಕ ಸಂತೋಷ್‌ ರಾವ್‌ನನ್ನು ಬಂಧಿಸಿದ್ದರು. ಪ್ರಕೃತಿ ಚಿಕಿತ್ಸಾಲಯ ಸಿಸಿಟಿವಿ ಸಂಗ್ರಹಿಸಿಲ್ಲ. ಮರಣೋತ್ತರ ಪರೀಕ್ಷೆಯಲ್ಲಿ ರಾತ್ರೋರಾತ್ರಿ ಕೆಟ್ಟ ಬೆಳಕಿನಲ್ಲಿ ಮಾಡಲಾಗಿದೆ. ಸಂತೋಷ್‌ ರಾವ್‌ ಕೊಲೆ ಮಾಡಿದ್ದಾನೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ಹೇಮಂತ್‌ ವಾದಿಸಿದ್ದರು.





ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸೌಜನ್ಯಾ 2012ರ ಅ.9 ರಂದು ಕಾಣೆಯಾಗಿದ್ದಳು. ಆಕೆಯ ತಂದೆ ಚಂದ್ರಪ್ಪಗೌಡ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅ.10 ರಂದು ಸೌಜನ್ಯಾ ಶವ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo