ಬೆಂಗಳೂರು: ಮದ್ಯ ದರ ಹೆಚ್ಚಳ ಮಾಡಿಲ್ಲ ಆ ಬಗ್ಗೆ ಯಾವುದೇ ಅಧಿಕೃತ ಆದೇಶ ಆಗಿಲ್ಲ ಇದರ ಬಗ್ಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಸ್ಪಷ್ಟನೆ ನೀಡಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿಗೆ ಹಣಕಾಸು ಕ್ರೋಡೀಕರಣ ಮಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ದರ ಏರಿಕೆ ಮಾಡಲಾಗಿದೆ ಎಂಬುವುದನ್ನು ನಿರಾಕರಣೆ ಮಾಡಿದರು. ದರ ಏರಿಕೆ ಬಗ್ಗೆ ನನಗೆ ಮಾಹಿತಿಯೂ ಇಲ್ಲ, ಎಣ್ಣೆ ದರ ಏರಿಕೆ ಇದುವರೆಗೂ ಆಗಿಲ್ಲ ಪ್ರಸ್ತಾವನೆ ಕೂಡ ಬಂದಿಲ್ಲವೆಂದು ತಿಳಿಸಿದರು.
ಅಬಕಾರಿ ಇಲಾಖೆಯಿಂದ ಯಾವುದೇ ದರ ಏರಿಕೆ ಮಾಡಿಲ್ಲ. ಹಣಕಾಸು ಇಲಾಖೆ ಇರಬಹುದು ಅಥವಾ ಕೆಎಸ್ ಬಿಎಸ್ ಎನ್ ನಲ್ಲಿ ಇರಬಹುದು ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಅಬಕಾರಿ ಸಚಿವರು ಸ್ಪಷ್ಟಪಡಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ