ಬೆಂಗಳೂರು : ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ತೀರ್ಮಾನ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ತೀರ್ಮಾನ ಮಾಡಿರುವ ಕಾಂಗ್ರೆಸ್ ಸರ್ಕಾರ ಮತ್ತೆ ತನ್ನ ಹಿಂದೂ ವಿರೋಧಿ ನೀತಿಯನ್ನು ಪ್ರದರ್ಶಿಸಿದೆ ಎಂದು ಕುಟುಕಿದ್ದಾರೆ.
ಅಲ್ಪಸಂಖ್ಯಾತರ ಓಲೈಕೆಗಾಗಿ ಸದಾ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕಾಂಗ್ರೆಸ್ ಬಲವಂತದ ಮತಾಂತರ, ಲವ್ ಜಿಹಾದ್ ನಂತಹ ಪ್ರಕರಣಗಳಿಗೆ ಗ್ರೀನ್ ಸಿಗ್ನಲ್ ನೀಡಿದೆ. ಹಿಂದೂಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ʼಗೆ ಧಿಕ್ಕಾರವಿರಲಿ ಎಂದು ಛೇಡಿಸಿದ್ದಾರೆ.
ಹಿಂದೂಗಳು ಈಗ ಜಾಗೃತರಾಗಿದ್ದಾರೆ. ನಿಮ್ಮ ಓಲೈಕೆಯ ಆಟ ಇನ್ನು ನಡೆಯದು. ಹಿಂದೂಗಳನ್ನು ರದ್ದಿ ಕಾಗದದಂತೆ ಬಳಸುವ ನಿಮ್ಮ ದಾರ್ಷ್ಟ್ಯಕ್ಕೆ ಶೀಘ್ರವೇ ಉತ್ತರ ಸಿಗಲಿದೆ. ಕಾಂಗ್ರೆಸ್ ಗ್ಯಾರಂಟಿ ಕಥೆ. ಮಹದೇವಪ್ಪನಿಗೆ ಮೋಸ, ಕಾಕಾ ಪಾಟೀಲರಿಗೆ ಟೋಪಿ ಎಂದು ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ