Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಬೆಳ್ತಂಗಡಿ; ಹುಟ್ಟು ಹಬ್ಬದ ದಿನವೇ ಅಪಘಾತಕ್ಕೆ ಬಲಿಯಾದ ಯುವಕ

Uduy


ಬೆಳ್ತಂಗಡಿ:- ಹುಟ್ಟುಹಬ್ಬದ ದಿನವೇ ಯುವಕನೋಬ್ಬ ಅಪಘಾತಕ್ಕೆ ಬಲಿಯಾದ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭಿಸಿದೆ. ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದು ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತ ಯುವಕ ಓಡೀಲು ನಿವಾಸಿಯಾಗಿರುವ ದೀಕ್ಷಿತ್ ಎಂದು ಗುರುತಿಸಲಾಗಿದೆ.ಇಂದು ದೀಕ್ಷಿತ್ ನ ಹುಟ್ಟುಹಬ್ಬವಾಗಿದ್ದು ಈ ಹಿನ್ನಲೆಯಲ್ಲಿ ಬೆಳಿಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ವೇಣೂರು ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo