ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಹಿಂದಿನ ಬಿಜೆಪಿ ಸರ್ಕಾರದ ಹಲವು ಯೋಜನೆ, ಕಾಯ್ದೆಗಳಿಗೆ ಕತ್ತರಿ ಹಾಕುತ್ತಿದ್ದು, ಇದೀಗ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಕೊಕ್ ನೀಡಲು ಅನುಮೋದನೆ ಪಡೆಯಲಾಗಿದೆ.
ಈ ಮೂಲಕ ಬಿಜೆಪಿಯ ಮಹತ್ವಾಕಾಂಕ್ಷಿಯ ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ ಸರ್ಕಾರ ಬ್ರೇಕ್ ಹಾಕಿದೆ.
ಈ ಹಿಂದೆಯೇಮತಾಂತರ ನಿಷೇಧ ಕಾಯ್ದೆ, ಗೋ ಹತ್ಯಾ ನಿಷೇಧ ಕಾಯ್ದೆ , ಹಿಜಾಬ್ ನಿಷೇಧ ಆದೇಶಗಳನ್ನು ವಾಪಸ್ ಪಡೆಯುವುದಾಗಿ ಹೇಳಿತ್ತು.ಇಂದು ನಡದ ಸಂಪುಟ ಸಭೆಯಲ್ಲಿ ಹಲವು ನಿರ್ಧಾರಗಳನ್ನ ತೆಗೆದುಕೊಳ್ಳಲಾಗಿದೆ. ಇದರಲ್ಲಿ ಮತಾಂತರ ನಿಷೇಧ ಕಾಯ್ದೆ ಪ್ರಮುಖವಾಗಿದೆ.
ಕೆಲವು ಬದಲಾವಣೆ ಮೂಲಕ ಮತಾಂತರ ನಿಷೇಧ ಕಾಯ್ದೆ ವಿಧೇಯಕ ತರಲು ಸಂಪುಟ ಸಭೆ ತಿರ್ಮಾನ ಮಾಡಿದೆ ಎಂದು ಹೆಚ್‌ಕೆ ಪಾಟೀಲ್ ಹೇಳಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ