Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ; ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

Udupi

 


ಬೆಂಗಳೂರು:-ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ.ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು, ಈ ಬಗ್ಗೆ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo