ತುಮಕೂರು : ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ಕೊಳಾಲ ಗ್ರಾಮದಲ್ಲಿ ತಾಳಿ ಕಟ್ಟೋ ವೇಳೆ ವಧು ಹಸೆಮಣೆಯಿಂದ ಎದ್ದು, ಮದುವೆ ಬೇಡವೆಂದು ಮಂಟಪದಿಂದ ಹೊರ ನಡೆದಿದ್ದಾಳೆ. ನಡೆಯಬೇಕಿದ್ದ ಮದುವೆ ಮುರಿದು ಬಿದ್ದಿದೆ. ದಿವ್ಯಾ ಹೆಸರಿನ ವಧು, ತಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ಹೀಗಾಗಿ ನನಗೆ ಮದುವೆ ಬೇಡ ಎಂದು ಕಲ್ಯಾಣ ಮಂಟಪದಿಂದ ಹೊರನಡೆದಿದ್ದಾಳೆ.
ಕೊಳಾಲ ಗ್ರಾಮದ ಕೆ.ಸಿ.ಎನ್. ಕನ್ವೆನ್ಷನ್ ಹಾಲ್ನಲ್ಲಿ ಇಂದು ಮದುವೆ ನಡೆಯುತ್ತಿತ್ತು. ವರ ವೆಂಕಟೇಶ್ ಜತೆ ಮದುವೆ ನಡೆಯುತ್ತಿತ್ತು. ನಿನ್ನೆ ರಾತ್ರಿ ರಿಸೆಪ್ಷನ್ನಲ್ಲಿ ದಿವ್ಯಾ, ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದಳು. ಆದರೆ, ಇಂದು ಬೆಳಗ್ಗೆ ಮುಹೂರ್ತಕ್ಕೆ ಬರುತ್ತಿದ್ದಂತೆ ಮದುವೆ ಬೇಡ ಎಂದಿದ್ದಾಳೆ.
ವರ ವೆಂಕಟೇಶ್, ದೊಡ್ಡಬಳ್ಳಾಪುರದ ತಾಲೂಕಿನ ಮೂಡ್ಲಕಾಳೇನಹಳ್ಳಿಯ ಸಿದ್ದಮ್ಮ ಮತ್ತು ಗೋವಿಂದರಾಜು ಪುತ್ರ. ವಧು ದಿವ್ಯಾ ನೆಲಮಂಗಲ ತಾಲೂಕಿನ ದೊಡ್ಡೆಬೆಲೆ ಗ್ರಾಮದ ಅಂಜನಮ್ಮ ನರಸಿಂಹಮೂರ್ತಿ ಪುತ್ರಿ. ವಧು ಮದುವೆ ಬೇಡ ಅಂತ ಉಲ್ಟಾ ಹೊಡೆಯುತ್ತಿದ್ದಂತೆ ಕಲ್ಯಾಣ ಮಂಟಪದಲ್ಲಿ ಗದ್ದಲ ಉಂಟಾಗಿದೆ.
ಎರಡು ಕಡೆಯವರಿಂದ ಮಾತಿನ ಚಕಮಕಿ ನಡೆದಿದ್ದು, ಇದೀಗ ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಸದ್ಯ ಕೊಳಾಲ ಪೊಲೀಸ್ ಠಾಣೆಯಲ್ಲಿ ಮಾತುಕತೆ ನಡೆಯುತ್ತಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ