Slider

ಪ್ರಧಾನಿ ರೋಡ್ ಶೋ ಸಂದರ್ಭದಲ್ಲಿ ಬಿಜೆಪಿ ನಾಯಕರ ಮಾದರಿ ನಡೆ: ಬಸವರಾಜ ಬೊಮ್ಮಾಯಿ

kannada news kannada news paper kannada news today - ಕನ್ನಡ ನ್ಯೂಸ್ ಟುಡೇ kannada news channel today kannada news dailyhunt kannada news kannada news a

 


ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೊ ವಿಜ್ಞಾನಿಗಳನ್ನು ಸನ್ಮಾನಿಸಲು ಆಗಮಿಸಿದಾಗ ನಮ್ಮ ಬಿಜೆಪಿ ನಾಯಕರು ಸಾರ್ವಜನಿಕರೊಂದಿಗೆ ನಿಂತು ಮಾದರಿಯ ನಡೆ ಅನುಸರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಚಂದ್ರಯಾನ 3 ಯಶಸ್ವಿ ಉಡಾವಣೆಗೆ ಕಾರಣರಾದ ವಿಜ್ಞಾನಿಗಳಿಗೆ ಸನ್ಮಾನ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರ ಶಿಷ್ಟಾಚಾರ ಪಾಲನೆಯಲ್ಲಿ ರಾಜ್ಯ ಬಿಜೆಪಿ ನಾಯಕರು ರಸ್ತೆಯ ಮಧ್ಯ ಜನರ ಜೊತೆ ನಿಂತ ಕೈ ಬೀಸಿರುವುದಕ್ಕೆ ಕಾಂಗ್ರೆಸ್ ಟೀಕೆ ಮಾಡಿರುವದಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರೋಟೋಕಾಲ್‌ ಪಾಲನೆಯಲ್ಲಿ ಯಾವುದೇ ಗೊಂದಲ ಇರಲಿಲ್ಲ. ನಾವೆಲ್ಲ ಸಾರ್ವಜನಿಕ ಜೀವನಕ್ಕೆ ಬಂದಿರುವುದು ಸೇವೆ ಮಾಡಲು.ಇಸ್ರೋದಂಥ ಸಂಸ್ಥೆ, ವಿಜ್ಞಾನಿಗಳು ಇಂಥ ದೊಡ್ಡ ಸಾಧನೆ ಮಾಡಿದಾಗ ನಾವು ಒಂದು ಹೆಜ್ಜೆ ಹಿಂದೆ ಸರಿಯಬೇಕು. ನಾವು ಹಿಂದೆ ಸರಿದು ಅವರಿಗೆ ಮಹತ್ವ ಕೊಡಬೇಕು. ಸೇವಾ ಮನೋಭಾವದಿಂದ ಸಾಮಾನ್ಯ ಜನರ ನಡುವೆ ನಮ ನಾಯಕರು ಇದ್ದು ಆ ಕೆಲಸ ಮಾಡಿದ್ದಾರೆ. ಅದನ್ನು ತಿಳಿದುಕೊಳ್ಳುವ, ಹೊಗಳುವ ಮನಸುಗಳು ಬೇಕಷ್ಟೇ ಎಂದರು.

ಇಸ್ರೋ ವಿಜ್ಞಾನಿಗಳಿಗೆ ಅಭಿನಂದಿಸಲು ಪ್ರಧಾನಿಯವರು ಬಂದಾಗ ಜನರ ಮಧ್ಯೆ ನಮ್ಮ ನಾಯಕರು ನಿಂತಿದ್ದಾರೆ.ನಮ್ಮ ನಾಯಕರು ಅತ್ಯಂತ ಮಾದರಿಯಾದ ಅನುಕರಣೀಯ ನಡವಳಿಕೆ ತೋರಿದ್ದಾರೆ. ಇವತ್ತಿನ ದಿನ ಎಲ್ಲರೂ ತಮ್ಮ ಸ್ಥಾನಮಾನಕ್ಕೆ ಪೈಪೋಟಿ ಮಾಡುತ್ತಾರೆ. ನಮ್ಮ ನಾಯಕರು ಅತ್ಯಂತ ಅನುಕರಣನೀಯ ಮಾದರಿ ಅನುಸರಿಸಿದ್ದಾರೆ. ಬಿಜೆಪಿ ನಾಯಕರು ಬೀದಿ ಪಾಲಾದರು, ಬ್ಯಾರಿಕೇಡ್ ಬಂಧಿ ಆದರು ಅಂತ ಕಾಂಗ್ರೆಸ್ ನವರು ಹೇಳಿರುವುದು ಅವರ ಮನಸ್ಥಿತಿ ತೋರಿಸುತ್ತದೆ ಎಂದರು. 










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo