ನವದೆಹಲಿ : ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ತೈಲ ಕಂಪನಿಗಳಿಗೆ ನೇರವಾಗಿ ಪಾವತಿಯಾಗುವ ಕಾರಣ ಖರೀದಿಸುವಾಗಲೇ 200 ರೂ. ಕಡಿತಗೊಳ್ಳಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ 14 ಕೆಜಿ ಎಲ್‌ಪಿಜಿಗೆ 1100 ರೂ. ಇದೆ. ಇನ್ನು ಮುಂದೆ 900 ರೂ.ಗೆ ಗ್ಯಾಸ್ ಸಿಲಿಂಡರ್ ಸಿಗಲಿದೆ.
ಕಚ್ಚಾ ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ತೈಲ ಕಂಪನಿಗಳು ಮೇ, ಜುಲೈನಲ್ಲಿ ಎಲ್‌ಪಿಜಿ ಸಿಲಿಂಡರ್ ದರವನ್ನು ಏರಿಸಿದ್ದವು. ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ