ಮಂಗಳೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ನಡೆಸಲಿದೆ. ರಾಹುಲ್ ಗಾಂಧಿಯವರು ಪ್ರಧಾನಿಯಾಗಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ನಾವು ಕರಾವಳಿಯಲ್ಲಿ ಗೆಲುವು ಸಾಧಿಸದಿರಬಹುದು, ಆದರೆ ತಂತ್ರಗಾರಿಕೆ ಬದಲು ಮಾಡಿ ಲೋಕಸಭಾ ಚುನಾವಣೆ ಎದುರಿಸುತ್ತೇವೆ. ಜೊತೆಗೆ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳನ್ನು ನೋಡಿ ಇಲ್ಲಿ ಸಾಕಷ್ಟು ಬದಲಾವಣೆ ಆಗಿದ್ದು, ಈ ಬಾರಿ ಕರಾವಳಿಯ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದರು.
ಲೋಕಸಭಾ ಚುನಾವಣೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಈಗಲೇ ತಯಾರಿ ನಡೆಸುತ್ತಿದ್ದೇವೆ. ಒಂದು ಲೋಕಸಭಾ ಕ್ಷೇತ್ರಕ್ಕೆ ಒಬ್ಬ ಮಂತ್ರಿ ಹಾಗೂ ರಾಜ್ಯದ ಹಿರಿಯ ಮುಖಂಡರನ್ನು ಎಐಸಿಸಿ ನೇಮಕ ಮಾಡುತ್ತದೆ. ಅವರು ಎಲ್ಲಾ ಮುಖಂಡರೊಂದಿಗೆ ಚರ್ಚೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಪಟ್ಟಿ ಮಾಡುತ್ತಾರೆ. ಬಳಿಕ ನಾವು ಚರ್ಚಿಸಿ ಲೋಕಸಭೆ ಚುನಾವಣೆಗೆ ಆರು ತಿಂಗಳ ಮೊದಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದೇವೆ ಎಂದು ವಿವರಿಸಿದರು.
ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಬಿಜೆಪಿಯವರಂತೆ ಮುಂದಕ್ಕೆ ಹಾಕುವುದಿಲ್ಲ. ಕೋರ್ಟ್ ನಲ್ಲಿ ಆದ ತಕ್ಷಣ ಚುನಾವಣೆಗೆ ತಯಾರಿ ನಡೆಸಲಿದ್ದೇವೆ ಎಂದು ಹೇಳಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ