ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾವನ್ನು ಈ ವರ್ಷ 'ನಾದಬ್ರಹ್ಮ' ಎಂದು ಕರೆಯಲ್ಪಡುವ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳವಾರ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ʼʼಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆʼʼ ಎಂದು ಪ್ರಕಟಿಸಿದರು.
ಮೈಸೂರು ದಸರಾ 2023ರ ಗಜಪಯಣ ಸೆಪ್ಟೆಂಬರ್ 1ಕ್ಕೆ ನಡೆಯಲಿದ್ದು, ಗಜ ಪಡೆಯ ಮೊದಲ ತಂಡ ಸೆಪ್ಟೆಂಬರ್ 1ಕ್ಕೆ ಮೈಸೂರಿಗೆ ಆಗಮಿಸಲಿವೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ