Slider


ಸೌಜನ್ಯ ಅತ್ಯಾಚಾರ ಮಾಡಿದ ಆರೋಪಿ ಹುಚ್ಚನಂತೆ ಅಲೆದಾಡಲಿ : ಕೊರಗಜ್ಜ ದೇವಸ್ಥಾನದಲ್ಲಿ ನಿತ್ಯಾನಂದ ಒಳಕಾಡು ವಿಶೇಷ ಪೂಜೆ

Nithyanandaolakaadu ನಿತ್ಯಾನಂದ ಒಳಕಾಡು sowjanyamangalorerapeandmurder santhoshrao koragajjatemple koragajja

 


ಉಡುಪಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿ ಕೊರಗಜ್ಜ ಕೊರಗಜ್ಜ ಎಂದು ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಅಂತ ಪ್ರಾರ್ಥಿಸಿ ಕರಾವಳಿಯ ಕಾರಣಿಕ ದೈವ ಕೊರಗಜ್ಜನಿಗೆ ಉರುಳು ಸೇವೆಯ ಮೂಲಕ ಪೂಜೆ ಸಲ್ಲಿಸಲಾಯಿತು.

ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರಿಂದ ವಿಶೇಷ ಉರುಳು ಸೇವೆ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಕೊರಗಜ್ಜ ದೈವಸ್ಥಾನದಲ್ಲಿ ಇಂದು ನಡೆಯಿತು.

ಮೊದಲು ಪ್ರಾರ್ಥನೆ ಸಲ್ಲಿಸಿದ ನಿತ್ಯಾನಂದ ಒಳಕಾಡು, ಬಳಿಕ ಸೌಜನ್ಯಾಳ ಭಾವ ಚಿತ್ರ ಹಿಡಿದು ಉರುಳು ಸೇವೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೌಜನ್ಯಾಗೆ ನ್ಯಾಯ ಸಿಗ್ಬೇಕು ಎನ್ನುವ ನಿಟ್ಟಿನಲ್ಲಿ ಅನೇಕ ಪ್ರತಿಭಟನೆಗಳು ನಡೀತಾ ಇದ್ರು. ಸರ್ಕಾರ ಈ ಬಗ್ಗೆ ಮೌನ ವಹಿಸಿದೆ. ಸೌಜನ್ಯ ಅತ್ಯಾಚಾರ ಮಾಡಿದ ಆರೋಪಿಗೆ ಕೊರಗಜ್ಜನೇ ಶಿಕ್ಷೆ ಕೊಡಬೇಕು ಇದಕ್ಕಾಗಿ ಉರುಳು ಸೇವೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದೇನೆ‌. ಆರೋಪಿ ಯಾರೆಂಬುದು ಪತ್ತೆ ಆಗಬೇಕು , ಆರೋಪಿಯೇ ಮುಂದೆ ಬಂದು ತಪ್ಪೊಪ್ಪಿಕೊಳ್ಳಬೇಕು. ಇಲ್ಲವಾದರೆ ಕೊರಗಜ್ಜ ಕೊರಗಜ್ಜ ಎಂದು ಹುಚ್ಚನಂತೆ ತಿರುಗಾಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ನಿತ್ಯಾನಂದ ಒಳಕಾಡುಅವರ ವಿಶೇಷ ಉರುಳು ಸೇವೆಗೆ ದೈವಸ್ಥಾನದ ಅಧ್ಯಕ್ಷರು ಉಪಾಧ್ಯಕ್ಷರು, ಸ್ಥಳೀಯ ರಿಕ್ಷಾ ಚಾಲಕರು, ಸ್ಥಳೀಯ ನಾಗರಿಕರು ಸಾಥ್ ನೀಡಿದರು.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo