Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಂಗಳೂರು: ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಕಂಡಕ್ಟರ್ ಸಾವು

kannada news kannada news paper kannada news today - ಕನ್ನಡ ನ್ಯೂಸ್ ಟುಡೇ kannada news channel today kannada news dailyhunt kannada news kannada news a

 


ಮಂಗಳೂರು: ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗದ ಚಾಲನೆಯಿಂದ ಬಸ್‌ನಿಂದ ಹೊರಬಿದ್ದು, ಮಂಗಳೂರಿನ ಸಿಟಿ ಬಸ್ ನಿರ್ವಾಹಕ ಸಾವನ್ನಪ್ಪಿರುವ ಘಟನೆ ಮಂಗಳೂರಿನ ನಂತೂರು ವೃತ್ತದಲ್ಲಿ ನಡೆದಿದೆ. ಬಸ್ ನಿರ್ವಾಹಕ ಈರಯ್ಯ(23) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಮೂಲತಃ ಬಾಗಲಕೋಟೆ ಜಿಲ್ಲೆಯ ನಿವಾಸಿಯಾದ ಪ್ರಸ್ತುತ ಸುರತ್ಕಲ್ ತಡಂಬೈಲ್ ನಲ್ಲಿ ವಾಸ್ತವ್ತವಿರುವ ಈರಯ್ಯ (23) 15 ನಂಬರ್ ನ ಖಾಸಗಿ ಸಿಟಿ ಬಸ್ ನಿರ್ವಾಹಕರಾಗಿದ್ದರು. ಮಂಗಳವಾರ ಮಧ್ಯಾಹ್ನ ವೇಳೆಗೆ ಬಸ್ ಕೆಪಿಟಿಯಿಂದ ಆಗಮಿಸಿ ನಂತೂರು ವೃತ್ತದಲ್ಲಿ ವೇಗದಲ್ಲಿ ತಿರುವು ಪಡೆದಾಗ ಬಸ್‌ ಮುಂಭಾಗದ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಹೊರಗೆ ಬಿದ್ದಿದ್ದಾರೆ. ಬಿದ್ದಿರುವ ರಭಸಕ್ಕೆ ಯುವಕನ ತಲೆಗೆ ಗಂಭೀರ ಗಾಯವಾಗಿದ್ದು, ತಕ್ಷಣ ಸ್ಥಳಲ್ಲಿದ್ದ ಟ್ರಾಫಿಕ್ ಪೊಲೀಸರು ಮತ್ತು ಸಾರ್ವಜನಿಕರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ತಲೆಗೆ ತೀವ್ರ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ದುರಾದೃಷ್ಟವಶಾತ್‌ ಈರಯ್ಯ ಸಾವನ್ನಪ್ಪಿದ್ದಾರೆ. ಘಟನೆಯ ದೃಶ್ಯ ಸಿಗ್ನಲ್‌ನಲ್ಲಿ ನಿಂತಿದ್ದ ಕಾರ್‌ನ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಯುವಕ ಬಸ್‌ನಿಂದ ಹೊರಬಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಗೆ ಬಸ್‌ನ ಅತಿಯಾದ ವೇಗವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo