ರಾಜ್ಯದ ಬಿಪಿಎಲ್ ಪಡಿತರದಾರರಿಗೆ 10 ಕೆಜಿ ಅಕ್ಕಿ ವಿತರಿಸುವಲ್ಲಿ ಸರ್ಕಾರ ಬದ್ಧವಾಗಿದ್ದು ಅರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ರದ್ದು ಮಾಡುವ ಪ್ರಸ್ತಾವ ಸದ್ಯಕ್ಕೆ ಸರ್ಕಾರದ ಮುಂದಿಲ್ಲ, 21 ಲಕ್ಷ ಬಿಪಿಎಲ್ ಪಡಿತರದಾರರು ಬ್ಯಾಂಕ್ ಖಾತೆಗಳನ್ನು ಹೊಂದಿರಲಿಲ್ಲ ಆದರಿಂದ ಗೊಂದಲ ಏರ್ಪಟ್ಟಿತ್ತು. ಇದೀಗ 7 ಲಕ್ಷ ಬ್ಯಾಂಕ್ ಕಾರ್ಡ್‍ಗಳು ಬ್ಯಾಂಕ್ ಖಾತೆ ತೆರೆದು ಲಿಂಕ್ ಮಾಡಲಾಗಿದ್ದು ಉಳಿದ 14 ಲಕ್ಷ ಪಡಿತರ ಕಾರ್ಡ್ ಗಳನ್ನು ಬ್ಯಾಂಕ್ ಅಕೌಂಟ್ ತೆರೆದು ಲಿಂಕ್ ಮಾಡಲು ಸೂಚನೆ ನೀಡಲಾಗಿದೆ ಎಂದರು.
ಕಾರು ಹಾಗೂ ಇತರೆ ವಾಹನ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡಲಿದ್ದೇವೆ ಎಂದು ಹಿಂದಿನ ಸರ್ಕಾರ ತೀರ್ಮಾನ ಕೈಗೊಂಡಿತ್ತು. ಆದರೆ ಈ ಬಗ್ಗೆ ನಮ್ಮ ಸರ್ಕಾರದಿಂದ ಯಾವುದೇ ತೀರ್ಮಾನ ಕೈಗೊಂಡಿಲ್ಲ. ರಾಜ್ಯದಲ್ಲಿ 1.28 ಕೋಟಿ ಕಾರ್ಡ್‍ದಾರರಿದ್ದು ಇಲಾಖೆ ಯ ಹಂತದಲ್ಲಿ ಪರಿಷ್ಕರಣೆ ಮಾಡಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ