ಟೋಬಿ ಸಿನಿಮಾ ವೀಕ್ಷಿಸಿದ ಯುವತಿಯೊಬ್ಬರು ಸಿನಿಮಾ ಚೆನ್ನಾಗಿಲ್ಲ ಎಂದ ಕಾರಣಕ್ಕೆ ಅಪರಿಚಿತ ಯುವಕನೋರ್ವ ದಬ್ಬಾಳಿಕೆ ನಡೆಸಿರುವ ಘಟನೆ ಇಂದು ಬೆಳಗ್ಗೆ ಮೈಸೂರಿನ ಸಂಗಮ್ ಚಿತ್ರಮಂದಿರದ ಬಳಿ ನಡೆದಿದೆ.
ಇನ್ನೂ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನಟ ಕಮ್ ನಿರ್ದೇಶಕ ರಾಜ್ ಬಿ ಶೆಟ್ಟಿ ಕ್ಷಮಾಪಣೆ ಕೇಳಿದ್ದಾರೆ.
'ಸಿನಿಮಾ ಕೂಡ ವಿಮರ್ಶೆಗೆ ಒಳಪಡುವ ಮಾಧ್ಯಮ. ನಮ್ಮ ಸಿನಿಮಾನ ದುಡ್ಡುಕೊಟ್ಟು ನೋಡುವ ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುವ ಹಕ್ಕು ಹೊಂದಿದ್ದಾರೆ. ಅದನ್ನು ಒಪ್ಪಲು ಅಥವಾ ಒಪ್ಪದಿರಲು ನಾವು ಸ್ವತಂತ್ರರು. ಆದರೆ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜನರಿಗೆ ಕಿರುಕುಳ ನೀಡಲು ಪ್ರಯತ್ನಿಸಬಾರದು. ಈ ವಿಡಿಯೋದಲ್ಲಿರುವ ವ್ಯಕ್ತಿಗಳಿಗೂ ನಮ್ಮ ಚಿತ್ರಕ್ಕೂ ಸಂಬಂಧ ಇಲ್ಲ. ಆದರೆ ಯುವತಿ ಎದುರಿಸಿದ ಕಿರುಕುಳಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ನಮ್ಮನ್ನು ಕ್ಷಮಿಸಿ' ಎಂದು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ