ಉಡುಪಿ : ನಾವು ಯಾರೂ ಕೂಡ ಚೈತ್ರಾ ಕುಂದಾಪುರಳ ಬೆಂಬಲಕ್ಕೆ ನಿಂತಿಲ್ಲ. ನಾವು ಯಾರೂ ಅವಳನ್ನು ರಕ್ಷಣೆ ಮಾಡುತ್ತಿಲ್ಲ. ಯಾರು ತಪ್ಪು ಮೋಸ ಮಾಡಿದ್ರು ಕೂಡ ಶಿಕ್ಷೆ ಆಗಲೇಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬಿಜೆಪಿ ಟಿಕೆಟ್ ಡೀಲ್ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಟೀಂ ಸಿಸಿಬಿ ವಶದಲ್ಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸಮಗ್ರ ತನಿಖೆ ಮಾಡಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ನನಗೂ ಚೈತ್ರಾ ಕುಂದಾಪುರಳಿಗೂ ಯಾವುದೇ ಸಂಬಂಧ ಇಲ್ಲ. ಕಾರ್ಯಕ್ರಮದಲ್ಲಿ ಸಿಕ್ಕಾಗ ಫೋಟೋ ತೆಗೆದುಕೊಂಡಿರಬಹುದು. ಕಾಸು ಕೊಟ್ಟು ಟಿಕೆಟ್ ಪಡೆಯುವ ಸಂಪ್ರದಾಯ ಬಿಜೆಪಿಯಲ್ಲಿ ಇಲ್ಲ ಎಂದರು.
ಚೈತ್ರಾ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಚೈತ್ರಾ ಕುಂದಾಪುರದ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ. ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು ಗೊತ್ತಿಲ್ಲ. ರಾಜಕೀಯ ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು.
ಪ್ರಕರಣದ ಕುರಿತು ತನಿಖೆ ಆಗುತ್ತಿದೆ ನಿಷ್ಪಕ್ಷವಾಗಿ ತನಿಖೆಯಾಗಲಿ. ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ ತಪ್ಪು ಮಾಡದೆ ಇದ್ದರೆ ಅನಾವಶ್ಯಕವಾಗಿ ತೊಂದರೆ ಕೊಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಮನವಿ ಮಾಡಿಕೊಂಡರು.
ಪ್ರಕರಣದ ಬಗ್ಗೆ ಮಾಹಿತಿಗಳನ್ನು ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆ. ಉನ್ನತ ಮಟ್ಟದ ತನಿಖೆಗೆ ನಾನು ಆಗ್ರಹಿಸುತ್ತೇನೆ. ನನ್ನ ಜೊತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಚೈತ್ರಾ ಹಿಂದೆ ಫೋಟೋ ತೆಗೆದುಕೊಂಡಿರಬಹುದು. ನನಗೆ ಚೈತ್ರಾ ಫೋನ್ ಮಾಡ್ಲಿಲ್ಲ ನಾನು ಕೂಡ ಅವಳಿಗೆ ಫೋನ್ ಮಾಡಿದ್ದು ಇಲ್ಲ ಎಂದು ತಿಳಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ