ಉಡುಪಿ: ಪರಶುರಾಮ ಥೀಮ್ ಪಾರ್ಕ್ ಗೆ ಸಂಬಂಧಿಸಿ ಕೇಳಿಬರುತ್ತಿರುವ ಆರೋಪಗಳ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ಯನ್ನು ರಾಜ್ಯ ಸರಕಾರಕ್ಕೆ ನೀಡಲಾಗುತ್ತದೆ. ಸರಕಾರದಿಂದ ಬರುವ ನಿರ್ದೇಶನದಂತೆ ಜಿಲ್ಲಾಡಳಿತ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದರು.
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಥೀಮ್‌ಪಾರ್ಕ್ ಕಾಮಗಾರಿಗೆ ಪ್ರವಾಸೋದ್ಯಮ ಇಲಾಖೆಯಿಂದ ಎರಡು ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಉಳಿದಂತೆ ಯಾವುದೇ ಇಲಾಖೆಯಿಂದ ಹಣ ನೀಡಿಲ್ಲ. ಈ ಕಾಮಗಾರಿಗೆ ಪ್ರವಾಸೋದ್ಯಮ ಇಲಾಖೆ ಆಡಳಿತ್ಮಾಕ ಅನುಮೋದನೆ ನೀಡಿರುವುದರಿಂದ ಈಗಾಗಲೇ ಈ ಕುರಿತು ಮಾಹಿತಿಯನ್ನು ಅವರಿಗೆ ನೀಡಲಾಗಿದೆ. ಇದೀಗ ಪತ್ರ ಕೂಡ ಬರೆಯಲಾಗಿದೆ ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ