ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಕನ್ನಡ ಹಾಗೂ ರೈತ ಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನೀಡಿದೆ.
ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಜಿಲ್ಲೆಯ ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚನೆ ನೀಡಿದೆ.
ಕರ್ನಾಟಕ ಬಂದ್‌ಗೆ ಖಾಸಗಿ ಶಾಲೆಗಳ ಒಕ್ಕೂಟ ನೈತಿಕ ಬೆಂಬಲ ವ್ಯಕ್ತಪಡಿಸಿದ್ದು, ರಜೆ ನೀಡುವ ನಿರ್ಧಾರವನ್ನು ಶಾಲಾ ಆಡಳಿತ ಮಂಡಳಿಗೆ ವಹಿಸಲಾಗಿದೆ ಎಂದು ಖಾಸಗಿ ಶಾಲೆಗಳ ಒಕ್ಕೂಟ ತಿಳಿಸಿದೆ.
ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳಿಗೆ ರಜೆ ನೀಡಬಹುದು. ಜಿಲ್ಲಾಧಿಕಾರಿಗಳು ರಜೆ ಘೋಷಿಸುವಂತೆ ಖಾಸಗಿ ಶಾಲೆ ಸಂಘಟನೆಗಳು ಮನವಿ ಸಲ್ಲಿಸಿವೆ.
To
ಪ್ರತ್ಯುತ್ತರಅಳಿಸಿ