ಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆ ಮತ್ತು ಕಣ್ಣುಗಳನ್ನು ಕಿತ್ತುಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನೇರ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನದ ಬಾರ್ಮರ್‌ನಲ್ಲಿ ಬಿಜೆಪಿಯ ಪರಿವರ್ತನ ಸಂಕಲ್ಪ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್, 'ನಮ್ಮ ಪೂರ್ವಜರು ತಮ್ಮ ಪ್ರಾಣದ ಹಂಗು ತೊರೆದು ಸಂರಕ್ಷಿಸಿದ ಸನಾತನ ಧರ್ಮವನ್ನು ಕೊನೆಗೊಳಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ನಾವು ಇನ್ನು ಮುಂದೆ ಅವರನ್ನು ಸಹಿಸುವುದಿಲ್ಲ' ಎಂದು ಹೇಳಿದರು.
'ಹಾಗೆ ಮಾಡಿದರೆ ಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಕಿತ್ತುಕೊಳ್ಳುತ್ತೇವೆ ಎಂದು ಹೇಳಲು ಬಯಸುತ್ತೇನೆ. ಸನಾತನ ಧರ್ಮದ ವಿರುದ್ಧ ಯಾರೇ ಮಾತನಾಡಲಿ ಅವರು ದೇಶದಲ್ಲಿ ತಮ್ಮ ರಾಜಕೀಯ ಶಕ್ತಿ ಮತ್ತು ಅಂತಸ್ತು ಸ್ಥಾಪಿಸಲು ಸಾಧ್ಯವಿಲ್ಲ' ಎಂದು ನೇರ ವಾಗ್ದಾಳಿ ನಡೆಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ