Slider

ಅ.3ರಂದು ಕರೆ ನೀಡಿರುವ ಉಡುಪಿ ಜಿಲ್ಲಾ ಬಂದ್‌‌ಗೆ ಯಾವುದೇ ಅವಕಾಶ ಇಲ್ಲ; ಎಸ್ಪಿ ಡಾ.ಅರುಣ್

 


ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಟೆಂಪೋ ಹಾಗೂ ಲಾರಿ ಮಾಲಕರ ಒಕ್ಕೂಟವು ಅ.3ರಂದು ಕರೆ ನೀಡಿರುವ ಉಡುಪಿ ಜಿಲ್ಲಾ ಬಂದ್‌ ಹಾಗೂ ಪ್ರತಿಭಟನೆಗೆ ಯಾವುದೇ ಅವಕಾಶ ಇಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಯಾವುದೇ ಬಂದ್‌ಗೆ ಕರೆ ನೀಡುವುದು, ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಮತ್ತು ಜನಸಾಮಾನ್ಯರ ಮೂಲಭೂತ ಹಕ್ಕು ವಿರೋಧಿ ಎಂದು ಕೇರಳ ಹೈಕೋರ್ಟ್ ಈ ಹಿಂದೆ ತನ್ನ ತೀರ್ಪಿನಲ್ಲಿ ತಿಳಿಸಿದೆ. ಈ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು ಎತ್ತಿ ಹಿಡಿದಿತ್ತು. ಆದುದರಿಂದ ಜನಸಾಮಾನ್ಯರ ಮೂಲಭೂತ ಹಕ್ಕು ಚ್ಯುತಿಗೊಳಿಸುವ ಯಾವುದೇ ರೀತಿಯ ಬಂದ್‌ಗೆ ಅಥವಾ ಅದಕ್ಕೆ ಸಂಬಂಧಿಸಿದ ಇತರೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ. ಉಡುಪಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹಮ್ಮಿಕೊಳ್ಳಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo