ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಸೆ. 28ರಂದು ಉತ್ತರ ಒಳನಾಡಿನ ಬೀದರ್, ಬೆಳಗಾವಿ, ವಿಜಯನಗರ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಹಾವೇರಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಕೆಲವು ಪ್ರದೇಶಗಳಲ್ಲಿ ಮಿಂಚು, ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ