Slider

ಚಿಕ್ಕಮಗಳೂರು :ಮನೆಯಲ್ಲಿ ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ


 ಚಿಕ್ಕಮಗಳೂರು : ಮನೆಯಲ್ಲಿ ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿಧ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ಎಂದು ಗುರುತಿಸಲಾಗಿದೆ.

ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶೃಂಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದ ಸುರಕ್ಷಾ ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಉಳಿದು ಕಾಲೇಜಿಗೆ ತೆರಳುತ್ತಿದ್ದಳು.

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಪೋಷಕರು ಹಲವು ವಿಚಾರಗಳಲ್ಲಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ ಸುರಕ್ಷಾ ಮನೆಯಲ್ಲಿ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo