ರಾಜ್ಯದಲ್ಲಿ ಕಳೆದ ಎರಡ್ಮೂರು ತಿಂಗಳುಗಳಿಂದ ಮದ್ಯ ಮಾರಾಟದಲ್ಲಿ ಇಳಿಕೆಯಾಗಿದ್ದು, ಸರ್ಕಾರ ಶಾಕ್ ಆಗಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಜ್ಯದಲ್ಲಿ ಶೇ. 5ರಷ್ಟು ಮದ್ಯ ಮಾರಾಟ ಇಳಿಕೆಯಾಗಿದೆ. ಜುಲೈ ತಿಂಗಳ ನಂತರದಿಂದ ರಾಜ್ಯದಲ್ಲಿ ಮದ್ಯ ಖರೀದಿಯಲ್ಲಿ ಇಳಿಕೆಯಾಗಿದೆ. ಹೀಗಾಗಿ ಬೊಕ್ಕಸಕ್ಕೆ ಸಾಕಷ್ಟು ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ.
ರಾಜ್ಯ ಸರ್ಕಾರ ಕಳೆದ ಕೆಲವು ತಿಂಗಳ ಹಿಂದೆ ಶೇ. 20ರಷ್ಟು ಅಬಕಾರಿ ಸುಂಕ ಏರಿಕೆ ಮಾಡಿತ್ತು. ಹೀಗಾಗಿ ಮದ್ಯ ಪ್ರಿಯರು ಸರ್ಕಾರಕ್ಕೆ ಶಾಕ್ ನೀಡಿದ್ದಾರೆ ಎನ್ನಲಾಗಿದೆ. ಹೊರ ರಾಜ್ಯಗಳಿಗೆ ವಿಮಾನದ ಮೂಲಕ ಪ್ರವಾಸಕ್ಕೆ ತೆರಳುವ ಜನ ಅಲ್ಲಿ ಕಡಿಮೆ ಬೆಲೆಗೆ ಸಿಗುವ ದುಬಾರಿ ಮದ್ಯವನ್ನು ತೆಗೆದುಕೊಂಡು ಬರುತ್ತಿದ್ದಾರೆ. ಆಗಷ್ಟ್ ತಿಂಗಳಲ್ಲಿ ಮದ್ಯ ಮಾರಾಟದಿಂದ ಆಗಸ್ಟ್ - 3096 ಕೋಟಿ ರೂ. ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ 3273 ಕೋಟಿ ರೂ. ಆದಾಯ ಸರ್ಕಾರಕ್ಕೆ ಬಂದಿದೆ. ಇದನ್ನು ಗಮನಿಸಿದರೆ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಸುಮಾರು 180 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮದ್ಯ ಮಾರಾಟ ಕಡಿಮೆಯಾಗಿರುವುದು ತಿಳಿದು ಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ