Slider

ದೆಹಲಿ ಅಬಕಾರಿ ಹಗರಣ: ದೆಹಲಿ ಸಿಎಂಗೆ ಇಡಿ ಸಮನ್ಸ್


 ನವದೆಹಲಿ;- ದೆಹಲಿ ಸಿಎಂ ಅರವಿಂದ್​​ ಕೇಜ್ರಿವಾಲ್​ಗೆ ಇಡಿ ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ನವೆಂಬರ್ 2 ರಂದು ಮದ್ಯ ಹಗರಣ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ಸೂಚಿಸಲಾಗಿದೆ. ಇದಕ್ಕೂ ಮುನ್ನ ಇದೇ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನಇದೇ ವರ್ಷ ಫೆಬ್ರವರಿಯಲ್ಲಿ ಬಂಧಿಸಲಾಗಿದೆ. ಇದುವರೆಗೂ ಅವರ ಜಾಮೀನು ಅರ್ಜು ಹಲವು ಬಾರಿ ತಿರಸ್ಕೃತಗೊಂಡಿದ್ದು, ಇನ್ನೂ ಜೈಲಿನಲ್ಲೇ ಇದ್ದಾರೆ.

ದೆಹಲಿ ಸರ್ಕಾರವು ನವೆಂಬರ್ 17, 2021 ರಂದು ಈ ನೀತಿಯನ್ನು ಜಾರಿಗೆ ತಂದಿತ್ತು, ಆದರೆ ಭ್ರಷ್ಟಾಚಾರದ ಆರೋಪಗಳ ನಡುವೆ ಸೆಪ್ಟೆಂಬರ್ 2022 ರ ಕೊನೆಯಲ್ಲಿ ಅದನ್ನು ರದ್ದುಗೊಳಿಸಿತ್ತು. ತನಿಖಾ ಸಂಸ್ಥೆಗಳ ಪ್ರಕಾರ, ಹೊಸ ನೀತಿಯ ಅನುಷ್ಠಾನದಲ್ಲಿ ಭಾರೀ ಅಕ್ರಮ ನಡೆದಿದೆ ಎನ್ನಲಾಗಿದೆ. ಸಗಟು ವ್ಯಾಪಾರಿಗಳ ಲಾಭವನ್ನು ಶೇಕಡಾ 5 ರಿಂದ 12 ಕ್ಕೆ ಹೆಚ್ಚಿಸಲು ಈ ನೀತಿ ಅನುವು ಮಾಡಿಕೊಟ್ಟಿದೆ ಎಂಬ ಆರೋಪವಿದೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo