ಕೇರಳ: ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಸಮಾವೇಶದಲ್ಲಿ ಇಂದು ಬೆಳಿಗ್ಗೆ ನಡೆದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕನ್ವೆನ್ಷನ್ ಸೆಂಟರ್‌ನೊಳಗೆ ಯೆಹೋವನ ಸಾಕ್ಷಿಗಳ ಸಮಾವೇಶದ ವೇಳೆ ಅನೇಕ ಸ್ಫೋಟಗಳು ಸಂಭವಿಸಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಇದು ಭಯೋತ್ಪಾದಕ ದಾಳಿ ಎಂದು ಪ್ರಾಥಮಿಕ ಮೌಲ್ಯಮಾಪನದಿಂದ ತಿಳಿದು ಬಂದಿದೆ. ಬಾಂಬ್ ಸ್ಕ್ವಾಡ್, ಫೊರೆನ್ಸಿಕ್ಸ್ ತಂಡ ಮತ್ತು ಎನ್‌ಐಎ ತಂಡ ಸ್ಥಳಕ್ಕೆ ತಲುಪಿ ಪರಿಶೀಲನೆ ಮಾಡುತ್ತಿದೆ. 5 ರಿಂದ 10 ಸೆಕೆಂಡುಗಳಲ್ಲಿ ನಾಲ್ಕು ಕಡೆ ಸ್ಫೋಟಗಳು ಸಂಭವಿಸಿದೆ. ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಂಡಗಳು ಸ್ಥಳದಲ್ಲಿವೆ. ಇದು ಬಾಂಬ್ ಸ್ಫೋಟವೇ ಎಂಬುದು ತನಿಖೆಯಿಂದ ಸ್ಪಷ್ಟವಾಗಲಿದೆ.
ಅಕ್ಟೋಬರ್ 27 ರಂದು ಈ ಕಾರ್ಯಕ್ರಮ ಪ್ರಾರಂಭವಾಗಿದೆ. ಇಂದು ಕೊನೆ ದಿನವಾಗಿತ್ತು. ಸ್ಫೋಟ ಸಂಭವಿಸಿದಾಗ 2000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಸ್ಫೋಟದ ಕಾರಣವನ್ನು ದೃಢಪಡಿಸಲಾಗಿಲ್ಲ ಎಂದು ಕಲಮಸ್ಸೆರಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕ್ರಿಶ್ಚಿಯನ್ ಗುಂಪಿನ ಸಮಾವೇಶ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾತನಾಡಿ, ರಜೆಯಲ್ಲಿರುವ ವೈದ್ಯರು ಸೇರಿದಂತೆ ಎಲ್ಲ ಆರೋಗ್ಯ ಕಾರ್ಯಕರ್ತರಿಗೆ ಕೂಡಲೇ ಹಿಂತಿರುಗುವಂತೆ ಸೂಚನೆ ನೀಡಿದ್ದಾರೆ. ಕಲಮಸ್ಸೆರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ನಿರ್ದೇಶಕರು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಅವರು ಸೂಚಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ