ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಸಂಷಕ್ಟ ಎದುರಾಗಿದೆ. ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶ ಹೊರಡಿಸಿದೆ.
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ಸಹ ಹೈಕೋರ್ಟ್ ತೆರವುಗೊಳಿಸಿದ್ದು, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಮತ್ತೆ ಸಿಬಿಐ ತನಿಖೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಡಿಕೆ ಶಿವಕುಮಾರ್ ಅವರು 2023ರಿಂದ 2018ರ ಮಧ್ಯದ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಅಲ್ಲದೇ ಮೇಲಿಂದ ಮೇಲೆ ತಡೆಯಾಜ್ಞೆಯನ್ನು ಕೋರ್ಟ್ ವಿಸ್ತರಿಸಿತ್ತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ