ಕೊಚ್ಚಿ: ಕ್ರಿಶ್ಚಿಯನ್ ಸಮುದಾಯದ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಎರ್ನಾಕುಲಂ ಜಿಲ್ಲೆಯ ಕಲಮಶ್ಶೇರಿಯಲ್ಲಿರುವ ಕ್ರೈಸ್ತ ಸಮುದಾಯದ ಕನ್ವೆನ್ಶನ್ ಸೆಂಟರ್‌ನಲ್ಲಿ ತಾನು ಬಾಂಬ್ ಇಟ್ಟಿದ್ದು ಎಂದು ಹೇಳಿ ವ್ಯಕ್ತಿಯೊಬ್ಬ ತ್ರಿಶೂರ್ ನ ಕೊಡಕ್ಕರ ಪೊಲೀಸರಿಗೆ ಶರಣಾಗಿದ್ದಾನೆ.
ಘಟನೆಗೆ ಸಂಬಂಧಿಸಿ ಕಣ್ಣೂರು ರೈಲು ನಿಲ್ದಾಣದಲ್ಲೂ ಶಂಕಿತ ಗುಜರಾತ್ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಪೊಲೀಸರಿಗೆ ಶರಣಾಗಿರುವ ವ್ಯಕ್ತಿಯನ್ನು ಬಂಧಿಸಿ ಕೊಚ್ಚಿಗೆ ಕರೆದೊಯ್ದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ವ್ಯಕ್ತಿ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆಯೇ ಎನ್ನುವ ಕುರಿತು ಉನ್ನತ ತನಿಖೆ ನಡೆಸುತ್ತಿದ್ದಾರೆ.
ತನಿಖೆಗಾಗಿ ಎನ್‌ಐಎಯ ಐದು ಸದಸ್ಯರ ತಂಡ ದೆಹಲಿಯಿಂದ ಕೊಚ್ಚಿಗೆ ಬಂದಿದ್ದು, ಸ್ಫೋಟದಲ್ಲಿ ಐಇಡಿ ಕುರುಹುಗಳು ಪತ್ತೆಯಾಗಿವೆ. ಸ್ಪೋಟಕ್ಕೆ ಬಳಸಲಾದ ನೀಲಿ ಬಣ್ಣದ ಕಾರು ಚೆಂಗನ್ನೂರಿನ ಮಹಿಳೆಯೊಬ್ಬರ ಹೆಸರಿನಲ್ಲಿ ನೋಂದಣಿಯಾಗಿದೆ ಎನ್ನಲಾಗಿದೆ.
ಸರಣಿ ಸ್ಫೋಟದಲ್ಲಿ ಗಾಯಗೊಂಡ 36 ಮಂದಿಯಲ್ಲಿ 10 ಮಂದಿ ಅಲುವಾ ರಾಜಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗು ಸೇರಿದಂತೆ ಮೂವರ ಸ್ಥಿತಿ ಗಂಭೀರವಾಗಿದೆ. ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಆಸ್ಪತ್ರೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ