Slider

ಉದ್ಯಾವರ; ಪಕ್ಷ ವಿರೋಧಿ ಚಟುವಟಿಕೆ - ಬಿಜೆಪಿಯಿಂದ ಮೂವರು ಗ್ರಾಂ.ಪಂ. ಸದಸ್ಯರ ಉಚ್ಚಾಟನೆ


ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ  ನಡೆಸಿದ ಮೂವರು ಗ್ರಾಪಂ ಸದಸ್ಯರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.

 ಬಿಜೆಪಿಯ ಅಧಿಕೃತ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವರ ಸೋಲಿಗೆ ಕಾರಣರಾಗಿರುವ ಮಾಲತಿ ಮತ್ತು ಅವರಿಗೆ ಬೆಂಬಲಿಸಿರುವ ಗ್ರಾಪಂ ಸದಸ್ಯರಾದ ಗಿರೀಶ್ ಸುವರ್ಣ ಹಾಗೂ ಫ್ರೀಡಾ ಡಿಸೋಜ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಾಗಿ ಕಾಪು ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೂಚನೆಯಂತೆ ಕೆಲವು ವರ್ಷಗಳ ಕಾಲ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ಎಸ್. ಕಲ್ಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo