ಉಡುಪಿ ಜಿಲ್ಲೆಯ ಲಾರಿ ಮಾಲೀಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಅಕ್ಟೋಬರ್ 5 ರಂದು ಸಭೆ ಕರೆದಿದ್ದಾರೆ.
ಸಭೆಯಲ್ಲಿ ಉಡುಪಿ ಜಿಲ್ಲೆಯ ಸಂಸದರು, ಶಾಸಕರು, ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರು ಈ ಹಿಂದೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಜಂಟಿ ಸಭೆ ನಡೆಸಿ ಶೀಘ್ರ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ