ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಸರ್ಕಾರ ಬಂದಾಗಲೇ ಮತಾಂಧ ಶಕ್ತಿಗಳು ಎಚ್ಚೆತ್ತು ಕೊಳ್ಳುತ್ತವೆ. ಪಾಕಿಸ್ತಾನದ ಪರ ಘೋಷಣೆ, ಧ್ವಜ ಹಾರಾಟ ನಡೆಯುತ್ತದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಪ್ರೇರಣೆ ಕೊಡುವ ಕೆಲಸ ನಡೆದಿದೆ. ಅವತ್ತೂ ಯಾವುದೇ ರೀತಿಯ ಕಠಿಣ ಕ್ರಮ ಕೈಗೊಳ್ಳದೇ ಇರುವ ಕಾರಣಕ್ಕೆ ಈಗ ಅಶಾಂತಿ ಸೃಷ್ಟಿಯಾಗಲು ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಮತಾಂದ ಶಕ್ತಿಗಳಿಗೆ ಶಕ್ತಿ ಹೆಚ್ಚಾಗಿದೆ ಎಂದು ಕಿಡಿಕಾರಿದ್ದಾರೆ.
ಈದ್ ಮಿಲಾದ್ನ ಸಂದರ್ಭದಲ್ಲಿ ಕೆಲವೊಂದು ಮತಾಂದ ಶಕ್ತಿಗಳು ಹಿಂದೂ ಸಮಾಜದ ಮೇಲೆ ದಾಳಿ ಮಾಡಿದ್ದನ್ನು ನಾನು ಖಂಡಿಸ್ತೇನೆ. ಶಿವಮೊಗ್ಗದಲ್ಲಿ ಆರಂಭಗೊಂಡಿದೆ, ಇದು ರಾಜ್ಯಕ್ಕೆ ವಿಸ್ತರಿಸದಂತೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ನಾನು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ