ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ಕಲ್ಲು ತೂರಾಟ ನಡೆದಿದೆ. ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಕಲ್ಲುತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕಲ್ಲು ತೂರಾಟದಿಂದ ಮನೆಗಳು, ವಾಹನಗಳಿಗೆ ಹಾನಿಯಾಗಿದೆ. ಪೊಲೀಸರು, ರ್ಯಾಪಿಡ್ ಆಕ್ಷನ್ ಫೋರ್ಸ್ ತಕ್ಷಣ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಸ್ಥಳಕ್ಕೆ ಎಸ್.ಪಿ. ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಿಡಿಗೇಡಿಗಳು ಪೊಲೀಸರ ಮೇಲೆಯೇ ಕಲ್ಲುತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ ಗಲಾಟೆಯಲ್ಲಿ ಸಿಲುಕಿದ್ದ 7 ಜನರನ್ನು ಪೊಲೀಸರು ರಕ್ಷಿಸಿದ್ದಾರೆ. ಮುನ್ನೆಚ್ಚರಿಕೆಯಿಂದ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ಅವರು ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ