ಶಿವಮೊಗ್ಗ: ಪ್ರಚೋದನಕಾರಿ ಭಾಷಣ ಆರೋಪ ಹಿನ್ನಲೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರಿಂದ ಸುಮೋಟೋ ಪ್ರಕರಣ ದಾಖಲಾಗಿದೆ.
ನಗರದ ಬಾಲರಾಜ್ ಅರಸ್ ರಸ್ತೆಯ ಎದುರು ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿಯ ಹಿನ್ನಲೆಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಕಾರ್ಯಕ್ರಮದಲ್ಲಿ ಹಲವು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಹಸಿರು ಬಣ್ಣ ಕಿತ್ತಾಕಿ ಕೇಸರಿ ಬಣ್ಣ ಬರುವವರೆಗೆ ಬಿಜೆಪಿ ಹೋರಾಟ ಮಾಡುತ್ತದೆ, ಪಾಕಿಸ್ತಾನ ಸೇರಿದಂತೆ ಅಖಂಡ ಭಾರತದ ಕನಸು ಇತ್ತು. ಆದರೆ ದೇಶದ್ರೋಹಿ ಮುಸ್ಲಿಮರು ಇದ್ದಾರೆ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಹೇಳಿಕೆಗೆ ಸುಮೋಟೋ ಪ್ರಕರಣ ದಾಖಲಾತಿಗೆ ಕಾರಣವಾಗಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಐಪಿಸಿ ಸೆಕ್ಷನ್ 153ಎ ಮತ್ತು 504 ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ