ಶಿವಮೊಗ್ಗ : ಶಿವಮೊಗ್ಗದಲ್ಲಿ ಕಾಂಗ್ರೆಸ್ ಮುಖಂಡನಿಗೆ ED ಶಾಕ್ ನೀಡಿದೆ. ಬೆಳ್ಳಂಬೆಳಗ್ಗೆ ಆರ್.ಎಂ ಮಂಜುನಾಥ್ ಗೌಡಗೆ ED ಬಿಸಿ ಮುಟ್ಟಿಸಿದೆ. ತೀರ್ಥಹಳ್ಳಿಯ ಬೆಟ್ಟದ ಮಕಿಯ ಮನೆ ಮೇಲೆ ED ದಾಳಿ ಮಾಡಿದೆ. ಆರ್.ಎಂ ಮಂಜುನಾಥ್ ಗೌಡ ಮೊನ್ನೆಯಷ್ಟೇ ಅವಿರೋಧವಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಮಂಜುನಾಥ್ ಗೌಡ ಮನೆಯಲ್ಲಿ ED ಅಧಿಕಾರಿಗಳು ಪರಿಶೀಲನೆ ಮಾಡಿದ್ದು, 5ಕ್ಕೂ ಹೆಚ್ಚು ಕಾರುಗಳಲ್ಲಿ 15ಕ್ಕೂ ಹೆಚ್ಚು ಅಧಿಕಾರಿಗಳು ಆಗಮಿಸಿದ್ದಾರೆ. ಡಿಸಿಸಿ ಬ್ಯಾಂಕ್ನಲ್ಲಿ ಬಂಗಾರದ ಹಗರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ್ದು, ಈ ಹಿಂದೆ ED ಅಧಿಕಾರಿಗಳು ಬ್ಯಾಂಕಿನಿಂದ ಮಾಹಿತಿ ಕೇಳಿದ್ದರಂತೆ. ಇದಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಗೌಡ ಮನೆ ಮೇಲೆ ರೇಡ್ ಮಾಡಿದ್ದಾರೆ. ಸದ್ಯ ಮಂಜುನಾಥ್ ಗೌಡ ತೀರ್ಥಹಳ್ಳಿಯಲ್ಲಿ ಇಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಕೆಲಸದ ನಿಮಿತ್ತ ಬೆಂಗಳೂರು ಹೋಗಿರೋ ಬಗ್ಗೆ ಮಾಹಿತಿ ಸಿಕ್ಕಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ