Slider


ಕುಂದಾಪುರ: ಚೂರಿ ಇರಿತಕ್ಕೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು


 ಕುಂದಾಪುರ: ಭಾನುವಾರ ರಾತ್ರಿ ಕುಂದಾಪುರದಲ್ಲಿ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್(42) ಸೋಮವಾರ ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 

ಭಾನುವಾರ ಸಂಜೆ ಸುಮಾರು 7ಗಂಟೆಗೆ ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಇರುವ ನ್ಯೂ ಡೆಲ್ಲಿ ಬಜಾರ್ ಅಂಗಡಿಯೆದುರು ರಾಘವೇಂದ್ರ ಅವರು ತನ್ನ ಕಾರಿನಲ್ಲಿ ಕೆಎ04ಎಂಬಿ 1131 ನಂಬರಿನ ಹೋಂಡಾ ಸಿಟಿ ಕಾರಿನಲ್ಲಿ ಬಂದಿದ್ದು ಇದೇ ಸಂದರ್ಭ ಕೆ.ಎ.51 ಎಂಜಿ 9665 ನಂಬರಿನ ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ತಗಾದೆ ತೆಗೆದು ಚೂರಿಯಲ್ಲಿ ರಾಘವೇಂದ್ರ ಅವರ ತೊಡೆಗೆ ಚೂರಿ ಹಾಕಿ ಕಾರಿನಲ್ಲಿ ಪರಾರಿಯಾಗಿದ್ದ. ಗಂಭೀರಗೊಂಡಿದ್ದ ರಾಘುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ ಬಳಿಕ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು. 

ಘಟನೆ ನಡೆಯುತ್ತಿದ್ದ ವೇಳೆ ಪ್ರತ್ಯಕ್ಷದರ್ಶಿಯೊಬ್ಬ ಆರೋಪಿಯ ಕಾರು ಮತ್ತು ಕಾರಿನೊಳಗೆ ಕುಳಿತಿದ್ದ ಆರೋಪಿಯ ಫೋಟೋ ಕ್ಲಿಕ್ಕಿಸಿಕೊಂಡಿದ್ದ. ಇದರಿಂದ ಆರೋಪಿಯನ್ನು ತೀರ್ಥಹಳ್ಳಿ ಮೂಲದ ಶಾಫಿ ಎಂದು ಗುರುತಿಸಲಾಗಿದ್ದು, ಕೆಲವು ದಿನಗಳಿಂದ ಕುಂದಾಪುರದ ಲಾಡ್ಜ್ ಒಂದರಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ. ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆಯಾದ ರಾಘವೇಂದ್ರ ಹಾಗೂ ಆರೋಪಿ ಶಾಫಿ ನಡುವಿನ ಹಣಕಾಸಿನ ತಕರಾರು ಕೊಲೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಮೃತ ರಾಘವೇಂದ್ರ ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo