ಉಡುಪಿ: ಕರಾವಳಿ ಭಾಗದ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆ "ಆಭರಣ ಜ್ಯುವೆಲ್ಲರ್ಸ್" ಮೇಲೆ ಐಟಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ ಬ್ರಹ್ಮಾವರಮತ್ತು ಪುತ್ತೂರು ಸೇರಿದಂತೆ ಹಲವಡೆ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಎರಡು ಇನ್ನೋವಾ ಕಾರಿನಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು ಮಂಗಳೂರಿನ ಶಿವಭಾಗ್‌ನಲ್ಲಿರುವ ಶಾಖೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದಲ್ಲಿ ಮಂಗಳೂರು, ಉಡುಪಿ ಸಹಿತ 14 ಕಡೆಗಳಲ್ಲಿ ಆಭರಣ ಜುವೆಲ್ಲರಿ ಶಾಖೆಗಳನ್ನು ಹೊಂದಿದ್ದು, ಎಲ್ಲಾ ಕಡೆಗಳಲ್ಲೂ ಏಕ ಕಾಲದಲ್ಲಿ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.
ಕರಾವಳಿ ಭಾಗದ ಈ ಪ್ರದೇಶಗಳಲ್ಲಿ ಐಟಿ ಅಧಿಕಾರಿಗಳು ಏಕಕಾಲದಲ್ಲಿ ಚಿನ್ನದ ಮಳಿಗೆಗೆಗಳ ಮೇಲೆ ದಾಳಿವಿನ ಮಾಡಿದ್ದರಿಂದ ಚಿನ್ನದ ವ್ಯಾಪಾರಿಗಳು ದಂಗಾಗಿದ್ದಾರೆ. ಈ ವೇಳೆ ಚಿನ್ನದ ಬಳಿಗೆಗಳಲ್ಲಿ ಪರಿಶೀಲ ನಡೆಸುತ್ತಿರುವ ಅಧಿಕಾರಿಗಳಿಂದ ಇನ್ನಷ್ಟೇ ಮಾಹಿತಿ ಹೊರ ಬರಬೇಕಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ