ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರತಿಕ್ರಿಯೆ ನೀಡಿದ್ದಾರೆ, ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಕಿಡಿಗೇಡಿತನ ಮಾಡುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.
ಬಿಜೆಪಿಯವರು ಅಧಿಕಾರದಲ್ಲಿ ಇಲ್ಲದಾಗ ಕಿತ್ತಾಟ ತಂದಿಡುವ ಕೆಲಸವನ್ನು ಮಾಡುತ್ತಾರೆ. ಸಮಾಜದಲ್ಲಿ ಕೋಮುಗಲಭೆ ಹಾಗೂ ಜಗಳ ಮಾಡಿಸುತ್ತಾರೆ. ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.
ಮೊದಲಿನಿಂದಲೂ ಬಿಜೆಪಿಗರುಕಾಂಗ್ರೆಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಅಧಿಕಾರದಲ್ಲಿ ಇದ್ದಾಗ ನೈತಿಕ ಪೊಲೀಸ್ ಗಿರಿ ಹಾಗೂ ಗಲಾಟೆ ಮಾಡುತ್ತಾರೆ. ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಕಿಡಿಗೇಡಿತನ ಮಾಡುತ್ತಾರೆ. ಇದೆಲ್ಲಾ ಅವರ ಹುಟ್ಟುಗುಣ ರಕ್ತದಲ್ಲೇ ಅವರಿಗೆ ಬಂದುಬಿಟ್ಟಿದೆ ಎಂದು ಬಿಜೆಪಿ ವಿರುದ್ಧ ರಾಮಲಿಂಗರೆಡ್ಡಿ ವಾಗ್ದಾಳಿ ನಡೆಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ