ಬೆಂಗಳೂರು;- ಸಿಎಂ, ಡಿಸಿಎಂ ನಡುವೆ ಕಲೆಕ್ಷನ್ ನಲ್ಲೂ ಪೈಪೋಟಿ ಇದೆ ಎಂದು ಡಿವಿ ಸದಾನಂದಗೌಡ ಹೇಳಿದ್ದಾರೆ
ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬ್ರ್ಯಾಂಡ್ ಸಿಎಂ, ಬ್ರ್ಯಾಂಡ್ ಡಿಸಿಎಂ ಹೇಗೆ ಮಾಡಬೇಕೆಂಬುದಕ್ಕೆ ಇವತ್ತು ರಾಜ್ಯದಲ್ಲಿ ನಡೆಯುತ್ತಿರುವ ಎಟಿಎಂ ಸರಕಾರದ ಆಡಳಿತವೇ ಒಂದು ಉದಾಹರಣೆ ಎಂದರು.
ಎಟಿಎಂ ಸರಕಾರದ ಕಲೆಕ್ಷನ್ ಟ್ರೀ' ಸಂಬಂಧ ಪೋಸ್ಟರ್ ಬಿಡುಗಡೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಲೆಕ್ಷನ್ ಸರಕಾರವಿದೆ. ಅದನ್ನು ಸಾಮಾನ್ಯ ಜನರೂ ತಿಳಿದುಕೊಂಡು ಅದನ್ನು ಅನುಭವಿಸುವಂತಾಗಿದೆ. ಅಭಿವೃದ್ಧಿ ಇಲ್ಲದೆ, ರಸ್ತೆಯ ಹೊಂಡ ಗುಂಡಿಗಳನ್ನೂ ತುಂಬಿಸಲಾಗದ ದುಸ್ಥಿತಿ ರಾಜ್ಯದ್ದು ಎಂದು ಟೀಕಿಸಿದರು.
ದೆಹಲಿ ಕಲೆಕ್ಷನ್ ಕೇಂದ್ರ ಬಿಂದು. ರಾಹುಲ್ ಗಾಂಧಿ ಇದರ ಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ. ಕಲೆಕ್ಷನ್‍ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್‍ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು. ಇದೊಂದು ಗಂಭೀರ- ಶೋಚನೀಯ ವಿಚಾರ ಎಂದು ಟೀಕಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ