ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ (40) ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ