ರಾಜ್ಯದಲ್ಲಿ ರೈತರು, ಜನರು ಬರದಿಂದಾಗಿ ತತ್ತರಿಸುತ್ತಿದ್ದರೂ ರಾಜ್ಯ ಸರ್ಕಾರ 33 ನೂತನ ಸಚಿವರಿಗಾಗಿ ಐಷಾರಾಮಿ ಕಾರು ಖರೀದಿ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆಯಲ್ಲಿ ಅನುತ್ಪಾದಕ ವೆಚ್ಚ ಕಡಿತ ಎಂದು ಹೇಳುತ್ತಿರುವ ರಾಜ್ಯ ಸರ್ಕಾರದಿಂದಲೇ ಸಚಿವರುಗಳಿಗಾಗಿ ಹೊಸ ಕಾರು ಖರೀದಿಯ ಈ ನಡೆ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಬರೋಬ್ಬರಿ 9 ಕೋಟಿ 90 ಲಕ್ಷ ರೂಪಾಯಿ ವೆಚ್ಚದಲ್ಲಿ ಹೈಬ್ರಿಡ್ ಕಾರು ಖರೀದಿಸಲಾಗಿದೆ. ಆಗಸ್ಟ್ 17ರಂದೇ 33 ಇನ್ನೋವಾ ಕಾರು ಖರೀದಿಗಾಗಿ ಹಣ ಬಿಡುಗಡೆ ಮಾಡಲಾಗಿತ್ತು. ಇದೀಗ ದಸರಾ ಹಿನ್ನೆಲೆಯಲ್ಲಿ ಎಲ್ಲಾ ಸಚಿವರ ಮನೆಗಳಿಗೆ ನೂತನ ಕಾರು ಆಗಮಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ