ಕರ್ನಾಟಕದ ಹಲವೆಡೆ ಇಂದು(ಸೋಮವಾರ) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ . ರಾಜ್ಯದ 17 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಮೇಲೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಕಾಲಕ್ಕೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗದಲ್ಲಿ ಇಂದು(ಅ.30) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ಇಬ್ಬರು ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗದ ಹಿರಿಯೂರಿನಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರ ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ ನಲ್ಲಿರುವ ಮನೆ ಮತ್ತು ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ