ಉಡುಪಿ: ಕೇರಳದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದ ಬೆನ್ನಲ್ಲೇ ಕರ್ನಾಟಕದ ಕರಾವಳಿ ಹಾಗೂ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದ ಬಾಂಬ್ ಸ್ಫೋಟದ ಬೆನ್ನಲ್ಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೂಕ್ಷ್ಮವಾಗಿ ಗಮನ ಇರಿಸಲಾಗಿದೆ. ತೀವ್ರ ನಿಗಾ ಇರಿಸುವಂತೆ ಗುಪ್ತಚರ ಇಲಾಖೆಗೆ ಸೂಚಿಸಲಾಗಿದೆ. ಕೆಲ ಸಂಘಟನೆ ಸಕ್ರಿಯ ಆಗಬಹುದು ಅಥವಾ ಆಗದೇ ಇರಬಹುದು. ಎಲ್ಲ ಎಸ್‌ಪಿಗಳಿಗೆ ಸೂಚನೆ ನೀಡಲಾಗಿದೆ. ವ್ಯಕ್ತಿ ಹಾಗೂ ಸಂಘಟನೆ ಮೇಲೆ ಅನುಮಾನ ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕರ್ನಾಟಕದಲ್ಲಿ ಇಂತಹ ಘಟನೆ ನಡೆಯಲು ಬಿಡಲ್ಲ ಎಂದರು.
ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 37 ಮಂದಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದಾನೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ