ಉಡುಪಿ: "ವಿಧಾನಸಭೆಯ ಸ್ಪೀಕರ್ ಸ್ಥಾನ ಎಂಬುದು ಮಸೀದಿಯ ಮೌಲ್ವಿಯ ಹುದ್ದೆಯಲ್ಲ"ಎಂದು ಬಿಜೆಪಿ ನಾಯಕ ಸಿಟಿ ರವಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ವಿರುದ್ದ ಕಿಡಿಕಾರಿದ್ದಾರೆ.
ತೆಲಂಗಾಣ ಚುನಾವಣೆ ಪ್ರಚಾರದ ವೇಳೆ ತೆಲಂಗಾಣ ಚುನಾವಣೆ ವೇಳೆ ಸಚಿವ ಜಮೀರ್ "ಕಾಂಗ್ರೆಸ್ ಪಕ್ಷ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್ ಸ್ಥಾನವನ್ನು ಮುಸ್ಲಿಮರಿಗೆ ನೀಡಿ, ಬಿಜೆಪಿ ಶಾಸಕರು ಸಹ ನಮಸ್ಕಾರ ಸ್ಪೀಕರ್ ಸಾಬ್ ಎನ್ನುವಂತೆ ಮಾಡಿದೆ ಎಂದು ಹೇಳಿಕೆ ನೀಡಿದ್ದರು. ಇದು ವಿವಾದದ ಸ್ವರೂಪ ಪಡೆದಿತ್ತು.
ಇದಕ್ಕೆ ತಿರುಗೇಟು ಕೊಟ್ಟು ಉಡುಪಿಯಲ್ಲಿ ಮಾತನಾಡಿದ, ಸಿಟಿ ರವಿ "ಸ್ಪೀಕರ್ಗೆ ಸಿಗುವುದು ಜಾಮಿಯ ಮಸೀದಿಯ ಮುಲ್ಲಾನಿಗೆ ಸಿಗುವ ಗೌರವ ಅಲ್ಲ. ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಕೆಳಗೆ ಇಳಿಸುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂತವರು ಸಚಿವರಾದರೆ ಹೀಗೆಯೇ ಆಗೋದು ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ , ಸ್ಪೀಕರ್ ಯುಟಿ ಖಾದರ್ ಅವರಿಗೆ ಘನತೆ ಇದೆ ಅದನ್ನು ಹಾಳು ಮಾಡಬೇಡಿ ಎಂದು ಹೇಳಿಕೆ ನೀಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ