ಚಾಮರಾಜನಗರ: ಜಿಂಕೆ ಭೇಟೆಯಾಡಲು ಬಂದಿದ್ದ ವ್ಯಕ್ತಿಯೊಬ್ಬ ಅರಣ್ಯಾಧಿಕಾರಿಗಳ ಗುಂಡೇಟಿಗೆ ಬಲಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದೂರು ರೇಂಜ್ ಬಳಿ ಈ ಘಟನೆ ನಡೆದಿದೆ. ಮೃತನನ್ನು ಭೀಮನಬೀಡು ಗ್ರಾಮದ ನಿವಾಸಿ ಮನು ಎಂದು ಗುರುತಿಸಲಾಗಿದೆ. ಜಿಂಕೆಯನ್ನು ಭೇಟೆಯಾಡಲು 10 ಬೇಟೆಗಾರರ ತಂಡ ತಡರಾತ್ರಿ ಬಂದಿದ್ದರು. ಈ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಬೇಟೆಗಾರರನ್ನು ಬಂಧಿಸಲು ಯತ್ನಿಸಿದ್ದಾರೆ.
ಈ ವೇಳೆ ಬೇಟೆಗಾರರು ಅರಣ್ಯಾಧಿಕಾರಿಗಳ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಅರಣ್ಯಾಧಿಕಾರಿ ಆತ್ಮರಕ್ಷಣೆಗಾಗಿ ಬೇಟೆಗಾರರ ಮೇಲೆ ಫೈರಿಂಗ್ ಮಾಡಿದ್ದಾರೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದವರು ಪರಾರಿಯಾಗಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ